ಪ್ರಗತಿವಾಹಿನಿ ಸುದ್ದಿ: ಪತ್ನಿಯ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೋರ್ವ ಪೊಲೀಸ್ ಅಧಿಕಾರಿಯ ನಿವಾಸದ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಪತ್ನಿ ತನಗೆ ಕಿರುಕುಳ ನೀಡುತ್ತಿದ್ದಾಳೆ ಎಂದು ವ್ಯಕ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಆದರೆ ಇದನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ. ಇದರಿಂದ ನೊಂದ ವ್ಯಕ್ತಿ ಈಗ ಪೊಲಿಸ್ ಅಧಿಕಾರಿ ಮನೆ ಎದುರೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಇನ್ನು ಕೆಲ ದಿನಗಳ ಹಿಂದೆ ಪ್ರದೀಪ್ ವಿರುದ್ಧ ಪತ್ನಿ ಕೌಟುಂಬಿಕ ದೊರ್ಜನ್ಯದ ದೂರು ನೀಡಿದ್ದಳು. ಆದರೆ ಪತ್ನಿಯ ಕಿರುಕುಳದ ಬಗ್ಗೆ ದೂರು ನೀಡಲು ಹೋದರೆ ಪೊಲೀಸರು ಸ್ವೀಕರಿಸಿಲ್ಲ. ಇದರಿಂದ ಪ್ರದೀಪ್ ಎಸ್ ಪಿ ನಿವಾಸಕ್ಕೆ ತೆರಳಿ ವಿಷ ಸೇವಿಸಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ