*ಪತ್ನಿ ಹಾಗೂ ಆಕೆಯ ಪ್ರಿಯತಮನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ಆಕೆಯ ಪ್ರಿಯತಮನನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆಯ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಪತ್ನಿ ಪ್ರಿಯಕರನ ಜೊತೆ ಇದ್ದಾಗಲೇ ನಿನ್ನೆ ರಾತ್ರಿ ಸಿಕ್ಕಿಬಿದ್ದಿದ್ದಳು ಎನ್ನಲಾಗಿದೆ. ಮರದ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಇಬ್ಬರನ್ನು ಹತ್ಯೆಗೈದಿದ್ದಾನೆ. ಬಳಿಕ ಕಟ್ಟಡದಿಂದ ಜಿಗಿದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.Home add -Advt … Continue reading *ಪತ್ನಿ ಹಾಗೂ ಆಕೆಯ ಪ್ರಿಯತಮನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ*