CrimeKannada NewsKarnataka NewsLatest

*ಪತ್ನಿಯನ್ನು ಕೊಲೆಗೈದ ಇಸ್ರೋ ನಿವೃತ್ತ ನೌಕರ: ವಿಚಾರಣೆ ವೇಳೆ ಹೇಳಿದ್ದೇನು ಗೊತ್ತಾ?*

ಪ್ರಗತಿವಾಹಿನಿ ಸುದ್ದಿ: ಇಸ್ರೋ ಸಂಸ್ಥೆ ನಿವೃತ್ತ ನೌಕರನೊಬ್ಬ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿ ವಿಚಿತ್ರ ಕಾರಣ ನೀಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ಈ ಘಟನೆ ನಡೆದಿದೆ. ಸಂಧ್ಯಾ ಪತಿಯಿಂದ ಕೊಲೆಯಾದ ಮಹಿಳೆ. ನಾಗಲೇಶ್ವರ ರಾವ್​ ಪತ್ನಿಯನ್ನೇ ಕೊಂದ ಪತಿ. ಆವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ನಾಗಲೇಶ್ವರ ರಾವ್​​, ತಾನು ಇಸ್ರೋ ಸಂಸ್ಥೆಯ ನಿವೃತ್ತ ನೌಕರ. ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದೆ. ಒಬ್ಬಳೆ ಮಗಳು. ಆಕೆ ಅಮೆರಿಕಾದಲ್ಲಿ ವಾಸವಾಗಿದ್ದಾಳೆ. ನಾನು ಸತ್ತರೆ ಪತ್ನಿಯನ್ನು ಯಾರು ನೋಡುಕೊಳ್ಳುತ್ತಾರೆ? ನಮಗೆ ಯಾರೂ ಸಂಬಂಧಿಕರೂ ಇಲ್ಲ. ಹತ್ತಿರದವರೂ ಯಾರೂ ಇಲ್ಲ. ಹಾಗಾಗಿ ಆಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ನಾನೂ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆಯಲ್ಲಿದ್ದೆ ಎಂದಿದ್ದಾನೆ.

ನಾಗಲೇಶ್ವರ ರಾವ್, ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button