Karnataka News

*ಪತ್ನಿ ಹಾಗೂ ಮಗನನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

Related Articles

32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೈಲು ಹಳಿ ಬಳಿ ಮೃತದೇಹ ಪತ್ತೆಯಾದಾಗ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಈ ವೇಳೆ ಅದು ಕಾರ್ತಿಕ್ ಭಟ್ ಎಂಬಾತನ ಮೃತದೇಹ ಎಂಬುದು ಗೊತ್ತಾಗಿದೆ. ಹಾಗಾಗಿ ಪೊಲೀಸರು ಕಾರ್ತಿಕ್ ವಾಸವಿದ್ದ ಫ್ಲ್ಯಾಟ್ ಬಳಿ ಬಂದಿದ್ದರು. ಈ ವೇಳೆ ಅವರ ಪತ್ನಿ ಹಾಗೂ ಮಗುವನ್ನು ಕೊಲೆಗೈದಿರುವುದು ಪತ್ತೆಯಗೈದೆ.

Home add -Advt

ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ತಾನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸ್ಥಳೀಯರು ಹೇಳುವ ಪ್ರಕಾರ ಕಾರ್ತಿಕ್ ಭಟ್ ಹಾಗೂ ಕುಟುಂಬದವರು ಅನುಕೂಲಸ್ಥ ಕುಟುಂಬದವರು, ಬಹಳ ಒಳ್ಳೆಯ ವ್ಯಕ್ತಿ. ಆದರೆ ಯಾವ ಕಾರಣಕ್ಕೆ ಇಂತಹ ನಿರ್ಧಾರ ಕೈಗೊಂಡರು ಎಂಬುದು ತಿಳಿದಿಲ್ಲ ಎಂದಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಮುಲ್ಕಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Related Articles

Back to top button