Latest

*ಗಂಡ ಚಾಕೋಲೇಟ್ ತಂದುಕೊಟ್ಟಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಹೆಂಡತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತಿ ಚಾಕೋಲೇಟ್ ತಂದುಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

30 ವರ್ಷದ ನಂದಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಂದಿನಿ ಪತಿ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ನಂದಿನಿ, ಪತಿ ಬೆಳಿಗ್ಗೆ ಕೆಲಸಕ್ಕೆ ಹೋಗುವಾಗ ತನಗೆ ಚಾಕೋಲೇಟ್ ತಂದುಕೊಡುವಂತೆ ಕೇಳಿದ್ದಳಂತೆ. ಮಧ್ಯಾಹ್ನವಾದರೂ ಪತಿ ಚಾಕೋಲೇಟ್ ತಂದುಕೊಟ್ಟಿಲ್ಲ, ಅಲ್ಲದೇ ಫೋನ್ ಮಾಡಿದರೆ ರಿಸೀವ್ ಕೂಡ ಮಾಡಿಲ್ಲ. ಇದರಿಂದ ನೊಂದ ನಂದಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಪತಿ ಮನೆಗೆ ಬಂದು ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದರು. ಚಾಕೋಲೇಟ್ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಎನ್ನಲಾಗುತ್ತಿದೆ. ಆದರೆ ಪೊಲೀಸರು ಈ ಬಗ್ಗೆ ಖಚಿತ ಮಾಹಿತಿ ನೀಡಿಲ್ಲ.

https://pragati.taskdun.com/world-health-day-kle-cch-mrcbelagavi/

Related Articles

Back to top button