ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.
ಗವ್ವಾಳಿ ಗ್ರಾಮದ ಸಾವಿತ್ರಿ ಬಾಬು ಗಾವಡಾ (೭೬) ಅವರ ಮೇಲೆ ಹಿಂದಿನಿಂದ ದಾಳಿ ನಡೆಸಿದ ಕಾಡುಹಂದಿ ಅವರ ಮೊಣಕಾಲು ಮತ್ತು ಸೊಂಟದ ಭಾಗವನ್ನು ತನ್ನ ಹರಿತವಾದ ಮುಳ್ಳಿನಿಂದ ತಿವಿದು ಗಾಯಗೊಳಿಸಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಭೀಮಗಡ ಉಪ ವಲಯ ಅರಣ್ಯ ಅಧಿಕಾರಿ ಮಲ್ಲೇಶಪ್ಪ ನಂದೆಪ್ಪಗೋಳ ಹಾಗೂ ಸಿಬ್ಬಂದಿ ಇಲಾಖೆಯ ವಾಹನದಲ್ಲಿ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಸಾವಿತ್ರಿ ಅವರಿಗೆ ಚಿಕಿತ್ಸೆ ನೀಡಿ ಅವರ ಗಾಯಗಳಿಗೆ ಹೊಲಿಗೆ ಹಾಕಲಾಗಿದ್ದು, ಅವರು ಸಧ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಿಕಿತ್ಸೆ ನೀಡಿರುವ ವೈದ್ಯ ಡಾ.ನಾರಾಯಣ ವಡ್ಡೀನ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ