*ಕಾರಿನ ಮೇಲೆ ಕಾಡಾನೆ ದಾಳಿ: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ*

ಪ್ರಗತಿವಾಹಿನಿ ಸುದ್ದಿ: ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ  ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ನಡೆಸಿದೆ. ಕಾರಿನ ಹಿಂಭಾಗ ಕಾಡಾನೆ ದಾಳಿಯಿಂದ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿದ್ದ ಮಹಮ್ಮದ್ ಜಾಹಿದ್ ತಾಯಿ, ಅಕ್ಕ ಅವರ ಮಕ್ಕಳು ಕಿರುಚಾಡಿದ್ದಾರೆ. ಆದರೂ ಸ್ಥಳದಿಂದ ಕದಲದ ಕಾಡಾನೆ, ಕಾರಿನ ಬಳಿಯೇ … Continue reading *ಕಾರಿನ ಮೇಲೆ ಕಾಡಾನೆ ದಾಳಿ: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ*