
ಪ್ರಗತಿವಾಹಿನಿ ಸುದ್ದಿ, ಹೈದರಾಬಾದ್: ಕುಮಾರಸ್ವಾಮಿ 2024 ರ ಲೋಕಸಭೆ ಮತ್ತು 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಜೆಡಿಎಸ್ ಮತ್ತು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿ (BRS) ಒಟ್ಟಾಗಿ ಹೋರಾಡಲಿದೆ ಎಂದು ಕರ್ನಾಟಕ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹೈದರಾಬಾದ್‌ನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ರಾಷ್ಟ್ರೀಯ ಪಕ್ಷ ಎಂದು ಘೋಷಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಕರ್ನಾಟಕದಲ್ಲಿ ‘ಬಿಜೆಪಿ-ಕಾಂಗ್ರೆಸ್ ಮುಕ್ತ’ ರಾಜಕೀಯ ವಾತಾವರಣಕ್ಕೆ ಕರೆ ನೀಡಿದ ಕುಮಾರಸ್ವಾಮಿ, “ಬಿಆರ್‌ಎಸ್ ಹೆಸರಿನಲ್ಲಿ ಟಿಆರ್‌ಎಸ್ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುವುದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ” ಎಂದರು.
ಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯ ವಾತಾವರಣವಿರುವ ರಾಜ್ಯಗಳಲ್ಲಿ ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಸೇರಿವೆ. ಇದೇ ಪರಿಸ್ಥಿತಿಯನ್ನು ಕರ್ನಾಟಕಕ್ಕೂ ತರಲು ನಾನು ಮತ್ತು ಚಂದ್ರಶೇಖರ್ ರಾವ್ ನಿರ್ಧರಿಸಿದ್ದೇವೆ. ನಾವು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಪೂರ್ಣ ಬಹುಮತದ ಸರಕಾರ ರಚಿಸಲು ಎರಡೂ ಪಕ್ಷಗಳು ಶ್ರಮಿಸಲಿವೆ ಎಂದರು.
ಕಫ, ನೆಗಡಿಗೆ ಸಂಬಂಧಿಸಿದ ನಾಲ್ಕು ಭಾರತೀಯ ಸಿರಪ್ ಗಳ ಬಗ್ಗೆ WHO ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ