Kannada NewsKarnataka NewsLatest
ಬೆಳಗಾವಿ ಜಿಲ್ಲೆಯಾದ್ಯಂತ ಪ್ರತಿಭಟನೆಗಿಳಿದ ಪೌರ ಕಾರ್ಮಿಕರು; ನೇರ ನೇಮಕಾತಿ ಪಟ್ಟಿ ಪ್ರಕಟಿಸಲು ಒತ್ತಾಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಾದ್ಯಂತ ಎಲ್ಲ ಪೌರಾಡಳಿತ ಸಂಸ್ಥೆಗಳ ಪೌರ ಕಾರ್ಮಿಕರು ನೇರ ನೇಮಕಾತಿ ನೀಡಿಕೆ ವಿಳಂಬ ಖಂಡಿಸಿ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗಿಳಿದಿದ್ದಾರೆ.
ಸವದತ್ತಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ಸಂಕೇಶ್ವರ, ಹುಕ್ಕೇರಿ, ಕುಡಚಿ, ಅರಬಾವಿ, ಹಾರೂಗೇರಿ, ಮುಗಳಖೋಡ, ರಾಯಬಾಗ ಹಾಗೂ ಸದಲಗಾ, ಯಕ್ಸಂಬಾ, ಐನಾಪುರ ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ಕಾರ್ಮಿಕರು ಆಯಾ ಪೌರಾಡಳಿತ ಸಂಸ್ಥೆ ಕಚೇರಿ ಎದುರು ಧರಣಿ ಸತ್ಯಾಗ್ರಹ ಆರಂಭಿಸಿದರು.
ಸರಕಾರ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಪ್ರತಿಭಟನಾಕಾರರು ಸರಕಾರಕ್ಕೆ ಒತ್ತಾಯಿಸಿದರು.
ಸಂಜೆ 5 ಗಂಟೆಗೆ ಪ್ರತಿಭಟನೆ ಮುಕ್ತಾಯಗೊಳಿಸಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಮತ್ತೆ ಧರಣಿ ಮುಂದುವರಿಸಲಾಗುತ್ತಿದೆ.
ಬೆಳಗಾವಿ ನಗರ ಬಸ್ ನಿಲ್ದಾಣ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ; ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ