Belagavi NewsBelgaum NewsElection NewsKannada NewsKarnataka NewsPolitics

*ವಿಕಸಿತ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲಪಡಿಸಲು ಮತ್ತೊಮ್ಮೆ  ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗೆಲ್ಲಿಸಿ: ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ 10 ವರ್ಷದ ಆಡಳಿತದಲ್ಲಿ ಭಾರತೀಯರು ಮೆಚ್ಚುವಂತ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ. 370 ಕಲಂ ರದ್ದುಗೊಳಿಸಿ ಭಾರತದ ಏಕತೆ ಗಟ್ಟಿಗೊಳಿಸಿದ್ದಾರೆ. ಭಾರತವನ್ನು ವಿಶ್ವಗುರುವಾಗಿಸಲು ಪ್ರಧಾನಿ ಮೋದಿ ಕೊಡುಗೆ ಅಪಾರವಾಗಿದೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆ ಎಲ್ ಈ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಡಾ. ಪ್ರಭಾಕರ ಕೋರೆ ಹೇಳಿದರು.

ಕೇರೂರ ಮತ್ತು ಮಾಂಜರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಅಣ್ಣಾಸಾಹೇಬ ಜೊಲ್ಲೆ ಪರ ಮತಯಾಚನೆ ಮಾಡಿ ಮಾತನಾಡಿ,ರೈತರ ಸಂಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ವರ್ಷಕ್ಕೆ 6 ಸಾವಿರ ಕೊಟ್ಟರೆ, ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ ರಾಜ್ಯ ಸರ್ಕಾರದಿಂದ – 4 ಸಾವಿರ ಕೊಡುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ರೈತರಿಗೆ ನೀಡುತ್ತಿದ್ದ 4 ಸಾವಿರ ಬಂದ ಮಾಡಿತು. ರೈತ ವಿರೋಧಿ ನಿರ್ಣಯ ಮಾಡಿದ ಇವರು ರೈತರ ಪರನಾ ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿ ಅವರ ಆಡಳಿತದ ಅವಧಿಯಲ್ಲಿ ಸಂಸದ ಅನ್ನಸಾಹೇಬ ಜೊಲ್ಲೆ  ಸಾಕಷ್ಟು ಅಭಿವೃದ್ಧಿಪರ ಕೆಲಸ ಮಾಡಿ ತೋರಿಸಿದ್ದಾರೆ. ಆದ್ದರಿಂದ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡೋಣ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಮಾಡಿ ಹಿಂದೂ ಸಮಾಜದ ಗೌರವವನ್ನು ಪ್ರಧಾನಿ ಮೋದಿ ಎತ್ತಿ ಹಿಡಿದಿದ್ದಾರೆ. ಬಹಳ ವಷರ್ಗಳಿಂದ ಕಗ್ಗಂಟಾಗಿದ್ದ ದೇಶದ ಅನೇಕ ಸಮಸ್ಯೆಗಳು ಮೋದಿ ಆಡಳಿತದಲ್ಲಿ ಬಗೆಹರಿದಿದೆ. ಜಲಜೀವನ ಮಷೀನ್ ಮೂಲಕ ಮನೆ ಮನೆಗೆ ನಲ್ಲಿ ನೀರು ಒದಗಿಸಲಾಗುತ್ತಿದೆ. ಉಜ್ವಲ ಯೋಜನೆಯಡಿಸುಮಾರು 13 ಕೋಟಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗಿದೆ. ಆಯುಸ್ಮಾನ ಭಾರತ್ ಅಡಿಯಲ್ಲಿ  ಉಚಿತ ಆರೋಗ್ಯ ಚಿಕಿತ್ಸೆ, ರಾಷ್ಟ್ರೀಯ ಶಿಕ್ಷಣ ನೀತಿ ಮುಂತಾದ ಅಭಿವೃದ್ಧಿ ಕಾರ್ಯಗಳಿಂದ ದೇಶವನ್ನು ಸದೃಢಗೊಳಿಸುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿಪರ ಆಡಳಿತ ಸಹಿಸದ ಕಾಂಗ್ರೆಸ್ ರಾಜ್ಯ, ದೇಶವನ್ನು ದಿವಾಳಿಯತ್ತ ಕೊಂಡೊಯ್ಯುವ ಹುನ್ನಾರ ನಡೆಸಿದೆ. ದೇಶದ ಅಭಿವೃದ್ಧಿ, ಭದ್ರತೆ, ಅಖಂಡತೆಗಾಗಿ ಬರುವ ಚುನಾವಣೆಯಲ್ಲಿ ಬಿಜೆಪಿ ಮತ ನೀಡಿ ಪ್ರಧಾನಿ ಮೋದಿ ಕೈ ಬಲಪಡಿಸೋಣ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ, ಮಾಜಿ ವಿಧಾನ ಪರಿಷತ ಸದಸ್ಯ ಮಹಾಂತೇಶ್ ಕವಟಗಿಮಠ, ಮಾಜಿ ಶಾಸಕರಾದ ಕಲ್ಲಪ್ಪಣ್ಣ ಮಗ್ಗೆನವರ್ ಬಾಳ ಸಾಹೇಬ್ ವಡ್ಡರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಚಿದಾನಂದ ಕೋರೆ ಸಹಕರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಅಜಿತರಾವ್ ದೇಸಾಯಿ , ಮಹಾವೀರ ಕಾತ್ರಾಳೇ, ಸುರೇಶ್ ಪಾಟೀಲ್ ಹಾಗೂ ಭಾರತೀಯ ಜನತಾ ಪಕ್ಷದ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button