ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆಗಾಲ ಮುಗಿಯುತ್ತಿದ್ದಂತೆ ಚಳಿಗಾಲ ಆರಂಭವಾಗಿದ್ದು, ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಉಂಟಾಗಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ, ನ. 21ರಿಂದ 25ರವರೆಗೆ ರಾಜ್ಯದಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಧಾರವಾಡ , ರಾಯಚೂರು, ಬೆಳಗಾವಿ, ಕೊಪ್ಪಳ, ಗಗದ, ಬಾಗಲಕೋಟೆ, ಬಿಜಾಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂಬರುವ ದಿನದಲ್ಲಿ ಗರಿಷ್ಠ ಉಷ್ಣಾಂಶ ಕಡಿಮೆ ಆಗುವ ಸಾಧ್ಯತೆ ಇದೆ.
ಹಾಗೆಯೇ ಕಲಬುರಗಿ, ಯಾದಗಿರಿ ಬೀದರ್, ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ಮುಂದಿನ ವಾರ ಕನಿಷ್ಠ ಉಷ್ಣಾಂಶ 12 ರಿಂದ 14 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 7 ದಿನಗಳಲ್ಲಿ ಗರಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಮಾಡಿದೆ.
ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ ಕನಿಷ್ಠ ಉಷ್ಣಾಂಶ 8 ರಿಂದ 10 ಡಿಗ್ರಿ ಸೆಂಟಿಗ್ರೇಡ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಹ ಕನಿಷ್ಠ ಉಷ್ಣಾಂಶ 12 ರಿಂದ 14 ಸೆಂಟಿಗ್ರೇಡ್ ದಾಖಲಾಗಲಿದೆ. ಹೀಗಾಗಿ ಚಳಿಯ ತೀವ್ರತೆ ಹೆಚ್ಚಾಗಬಹುದು ಎಂದು ಇಲಾಖೆ ತಿಳಿಸಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ