ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 13 ರಿಂದ ಆರಂಭಗೊಳ್ಳಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆಯನ್ನು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗುರುವಾರ(ಡಿ.2) ಪರಿಶೀಲಿಸಲಿದ್ದಾರೆ.
ಡಿ.2ರಂದು ಬೆಳಗಾವಿಗೆ ಆಗಮಿಸಲಿರುವ ಅವರಿಬ್ಬರು ಬೆಳಗ್ಗೆ 10.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಿ ಅಧಿವೇಶನ ಪೂರ್ವಸಿದ್ಧತೆ ಕುರಿತು ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ.
ಬಳಿಕ ಜಂಟಿ ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಒಮಿಕ್ರಾನ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತದೆಯೋ ಇಲ್ಲವೋ ಎನ್ನುವ ವದಂತಿಯ ಮಧ್ಯೆಯೇ ಸ್ಪೀಕರ್ ಮತ್ತು ಸಭಾಪತಿ ಸಿದ್ಧತೆ ಪರಿಶೀಲಿಸಲು ಆಗಮಿಸುತ್ತಿದ್ದಾರೆ. ಹಾಗಾಗಿ ಸರಕಾರದ ಮಟ್ಟದಲ್ಲಿ ಅಧಿವೇಶನ ನಡೆಸದಿರುವ ಕುರಿತು ಯಾವುದೇ ಪ್ರಸ್ತಾವನೆ ಸಧ್ಯಕ್ಕಿಲ್ಲ ಎನ್ನುವುದು ಸ್ಪಷ್ಟವಾಗಿದೆ.
ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಮಾರ್ಗ ಸೂಚಿಯ ಮೇಲೆ ರಾಜ್ಯ ಸರಕಾರ ಅಧಿವೇಶನದ ಕುರಿತು ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ಈಗಾಗಲೆ ಎಲ್ಲ ಸಿದ್ಧತೆ ನಡೆಸುತ್ತಿದೆ.
ಲಸಿಕೆ ಪಡೆಯದವರಿಗೆ ಮಾತ್ರ ಸರ್ಕಾರಿ ಸೌಲಭ್ಯ ಎಂಬ ಶಿಫಾರಸ್ಸನ್ನು ಸರ್ಕಾರ ಒಪ್ಪಲು ಸಾಧ್ಯವಿಲ್ಲ – ಸುಧಾಕರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ