Karnataka NewsPolitics

*ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಹಗರಣ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ದಾಳಿ ನಡೆಸಿದ್ದು, ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಸೇರಿದಂತೆ ಕೆಲ ಆಪ್ತ ಸಹಾಯಕರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಮಯ ಸಮೀಪಿಸುತ್ತಿರುವ ಬೆನ್ನಲ್ಲೇ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಹಲವೆಡೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button