Latest

ಅಮೃತಾ ಫಡ್ನವಿಸ್ ಬಗ್ಗೆ ಆಕ್ಷೇಪಾರ್ಹ ಕಮೆಂಟ್; ಮಹಿಳೆ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಸ್ಮೃತಿ ಪಾಂಚಲ್ ಬಂಧಿತ ಮಹಿಳೆ. ಕಳೆದ ಎರಡು ವರ್ಷಗಳ ಹಿಂದೆ ಸ್ಮೃತಿ ಪಾಂಚಲ್ ಅಮೃತಾ ಫಡ್ನವಿಸ್ ಅವರ ಅಧಿಕೃತ ಫೇಸ್ ಬುಕ್ ನ ಪೋಸ್ಟ್ ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದರು ಎನ್ನಲಾಗಿದೆ. ಅಲ್ಲದೇ ಬೇರೆ ಬೇರೆ 53 ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಕಮೆಂಟ್ ಮಾಡಿದ್ದರು ಎಂಬ ಆರೋಪ ಮಹಿಳೆಯ ಮೇಲೆ ಇತ್ತು.

Home add -Advt

ಈ ಹಿನ್ನೆಲೆಯಲ್ಲಿ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ದೂರು ದಾಖಲಿಸಿದ್ದರು. ಇದೀಗ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಸಿಎಂ ಸೇರಿದಂತೆ ಕಾಂಗ್ರೆಸ್ ನ 8 ಶಾಸಕರು BJPಗೆ ಸೇರ್ಪಡೆ

https://pragati.taskdun.com/politics/goacongress-8-mlasbjpjoin/

Related Articles

Back to top button