Karnataka News

*ತನ್ನ ಚಪಲಕ್ಕೆ ಅಡ್ಡಿಯಾದ ಕುಟುಂಬವನ್ನೆ ಚಟ್ಟ ಕಟ್ಟಲು ಯತ್ನಿಸಿದಾಕೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ತನ್ನ ಸರಸ ಸಲ್ಲಾಪಕ್ಕೆ ಅಡ್ಡಿಯಾದ ಇಡೀ ಕುಟುಂಬವನ್ನೆ ಮಹಿಳೆ ಚಟ್ಟ ಕಟ್ಟಲು ಯತ್ನಿಸಿ ಪೊಲೀಸ್ ಕೈಯಲ್ಲಿ ಲಾಕ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ಅನ್ನಕ್ಕೆ ವಿಷ ಹಾಕಿ ಪತಿ, ಮಕ್ಕಳು ಹಾಗೂ ಅತ್ತೆ-ಮಾವನ ಕೊಲೆಗೆ ಯತ್ನಿಸಿದ್ದ ಆರೋಪಿ ಮಹಿಳೆಯನ್ನ ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿದೆ‌. ಚೈತ್ರಾ (33) ಬಂಧಿತ ಮಹಿಳೆ.

11 ವರ್ಷಗಳ ಹಿಂದೆ ಗಜೇಂದ್ರ ಎಂಬವರೊಂದಿಗೆ ಚೈತ್ರಾ ವಿವಾಹವಾಗಿದ್ದಳು. ಕೆಲ ವರ್ಷಗಳ ಕಾಲ ಎಲ್ಲವೂ ಚೆನ್ನಾಗಿಯೇ ಇತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದ್ರೆ ಕಳೆದ ಮೂರು ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು. 

ಈ ನಡುವೆಯೇ ಚೈತ್ರಾಳಿಗೆ ಪುನೀತ್ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್ ಜೊತೆಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು.

ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಅನ್ಯೋನ್ಯವಾಗಿದ್ದರು. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು.

ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಮುಗಿಸುವ ಸ್ಕೆಚ್ ಹಾಕಿದಳು.

ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು. ಇದಕ್ಕೆ ಪರಸಂಗ ಹೊಂದಿದ್ದ ಶಿವು ಸಹಕಾರ ನೀಡಿದ್ದ. 

ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಚೈತ್ರಾಳನ್ನ ಬಂಧಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button