
ಪ್ರಗತಿವಾಹಿನಿ ಸುದ್ದಿ: ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗುವ ಮೂಲಕ ದೇಶ ವಿರೋಧಿ ಘೋಷಣೆ ಕೂಗಿದ್ದಳು. ಭಾರತ್ ಮಾತಾಕಿ ಜೈ ಘೋಷಣೆ ವೇಳೆ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಳು. ಮಹಿಳೆಯ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆ ನಡೆಸಿದ ಪೊಲೀಸರು ಹುಲಿಮಂಗಲದ ಪೋಡು ಬಳಿ ಶೆಡ್ ನಲ್ಲಿ ವಾಸವಾಗಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್ ಎಂದು ಗುರುತಿಸಲಾಗಿದೆ.




