Latest

*BJPಯ ಈ ದೊಡ್ಡ ನಿರ್ಧಾರಕ್ಕೆ ನನ್ನ ಸ್ವಾಗತ ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಶೃಂಗೇರಿ: ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ತಿಂಗಳು ಮಾತ್ರ ಸಮಯವಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಳಿಕ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಲಿದೆ. ಈ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಚರ್ಚೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿಯಿಂದ ಸಚಿವ ಆರ್.ಅಶೋಕ್ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ವಿಚರವಾಗಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ತಮ್ಮ ವಿರುದ್ಧ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ರಾಜಕಾರಣದಲ್ಲಿ ಯಾರೇ ಬಂದರೂ ಎದುರಿಸಬೇಕು, ಹೋರಾಡಬೇಕು. ರಾಜಕಾರಣದಲ್ಲಿ ಯಾರು ಯಾರ ವಿರುದ್ಧವಾದರೂ ಸ್ಪರ್ಧೆ ಮಾಡಬಹುದು. ಅಶೋಕ್ ಸ್ಪರ್ಧೆ ಮಾಡುವುದಾದರೆ ಅವರಿಗೆ ನನ್ನ ಸ್ವಾಗತವಿದೆ ಎಂದು ಹೇಳಿದರು.

ಬಿಜೆಪಿಯವರ ಈ ದೊಡ್ಡ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಅಶೋಕ್ ನನ್ನ ವಿರುದ್ಧ ಸ್ಪರ್ಧೆಗೆ ನಿಲ್ಲುವುದಾದರೆ ನಿಲ್ಲಲಿ ಸಂತೋಷ ಎಂದರು. ಇನ್ನು ಶೀಘ್ರದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

https://pragati.taskdun.com/karnatakarain-updateimd-5/

Home add -Advt

Related Articles

Back to top button