Belagavi NewsBelgaum NewsCrimeKannada NewsKarnataka NewsNational

*ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಲ್ಲಿನಿಂದ ಜಜ್ಜಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ಹೊರವಲಯದ ಅಮಟೂರ–ನಯಾನಗರ ಸಂಪರ್ಕಿಸುವ ಕಚ್ಚಾ ರಸ್ತೆಯಲ್ಲಿ ಭಾನುವಾರ ನಡೆದಿದೆ.

ಮೃತ ಮಹಿಳೆಯನ್ನು ಬೈಲಹೊಂಗಲ ನಗರದ ಗೊಲ್ಲರ ಓಣಿಯ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31) ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳು ಮಹಿಳೆಯ ಮೇಲೆ ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದ ಬಳಿಕ, ಮೃತದೇಹವನ್ನು ಸಮೀಪದ ಪೊದೆಯೊಳಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸಿಪಿಐ ಪ್ರಮೋದ ಯಲಿಗಾರ, ಪಿಎಸ್‌ಐ ವಾಹಿದ್ ಯಾದವಾಡ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದೇ ವೇಳೆ ಸಮಾಜ ಸೇವಕ ಮಲ್ಲಿಕಾರ್ಜುನ ಗಾಣಿಗೇರ ಅವರು ಮೃತದೇಹವನ್ನು ಸಾಗಿಸಲು ಪೊಲೀಸರಿಗೆ ನೆರವಾದರು.

ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button