CrimeKannada NewsKarnataka NewsLatest

*ಎರಡು ವರ್ಷದ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ಈ ವಿದ್ರಾವಕ ಘಟನೆ ನಡೆದಿದ್ದು, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ ಜೊತೆ ಗಂಗಾಮಣಿ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳು. ವೃತ್ತಿಯಲ್ಲಿ ಕ್ಯಾಂಟರ್ ಡ್ರೈವರ್ ಆಗಿರುವ ಯತೀಶ್, ಎಂದಿನಿಂತೆ ಕೆಲಸಕ್ಕೆ ತೆರಳಿದ್ದಾರೆ. ಇನ್ನು ಇಬ್ಬರು ಮಕ್ಕಳು  ವಿನಯ್ (7) ಹಾಗೂ ರಕ್ಷಿತಾ (5) ಶಾಲೆಗೆ ಹೋಗಿದ್ದಾರೆ. ಆಗ ಮನೆಯಲ್ಲಿ ಯಾರು ಇಲ್ಲದ ವೇಳೆ ಗಂಗಾಮಣಿ ತನ್ನ ಎರಡು ವರ್ಷದ ಪ್ರೇಕ್ಷಾ ಜೊತೆ ನೇಣಿಗೆ ಶರಣಾಗಿದ್ದಾಳೆ.

ಇನ್ನು ಮಕ್ಕಳು ಶಾಲೆಯಿಂದ ಮನೆಗೆ ಬಂದಿದ್ದಾರೆ. ಆದ್ರೆ, ಮನೆ ಒಳಗಿನಿಂದ ಲಾಕ್ ಆಗಿದ್ದು, ಇದನ್ನು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಬಳಿಕ ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button