
ಪ್ರಗತಿ ವಾಹಿನಿ ಸುದ್ದಿ ಲಕ್ನೊ –
ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದರಿಂದ ಮನ ನೊಂದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರ್‌ದ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ವಾಸಿಮ್ ಮತ್ತು ಸಲೀಮ್ ಎಂಬ ಯುವಕರು ಯುವತಿಯ ಅಶ್ಲೀಲ ಚಿತ್ರಗಳನ್ನು ತೆಗೆದಿದ್ದರು. ಬಳಿಕ ಅದನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಈ ಕುರಿತು ಯುವತಿ ಬೆಹತ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು.
ಬಳಿಕ ಯುವಕರು ತಾವು ಹೇಳಿದಂತೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದರು. ಇದರಿಂದ ಆಘಾತಗೊಂಡ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಯುವತಿಯ ದೂರನ್ನು ಗಂಭೀರವಾಗಿ ಪರಿಗಣಿಸದ ಕಾರಣ ಓರ್ವ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಆತ್ಮಹತ್ಯೆಯ ದೂರನ್ನು ಕುಟುಂಬದವರು ನೀಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಸಹರಾನ್‌ಪುರ ಗ್ರಾಮೀಣ ಎಸ್‌ಪಿ ಅತುಲ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅನೈತಿಕ ಸಂಬಂಧ ಕಣ್ಣಾರೆ ನೋಡಿ ಆಘಾತ: ತಾಯಿಯ ಪ್ರಿಯಕರನನ್ನು ಇರಿದು ಕೊಂದ ಮಗ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ