ಅನೈತಿಕ ಸಂಬಂಧಕ್ಕೆ ಬಲಿಯಾದಳಾ ವಿವಾಹಿತೆ ?

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ಪರಪುರುಷನ ಜೊತೆ ತೆರಳಿದ್ದ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ.

ದಿವ್ಯಾ ಎಂಬ ೨೨ ವರ್ಷದ ಯುವತಿ ಮೃತಪಟ್ಟವಳು. ಈಕೆಗೆ ಮೂರು ವರ್ಷದ ಹಿಂದೆಯೇ ಮದುವೆಯಾಗಿತ್ತು. ಆದರೆ ಮಂಜುನಾಥ ಎಂಬ ಯುವಕನ ಮೋಹಕ್ಕೆ ಸಿಲುಕಿದ್ದಳು. ಮೂರು ತಿಂಗಳ ಹಿಂದೆ ಮಂಜುನಾಥನ ಜೊತೆ ಹೋಗಿ ಹಿರಿಯೂರಿನಲ್ಲಿ ಇದ್ದಳು.

ಆದರೆ ಇತ್ತೀಚೆಗೆ ಅನಾರೋಗ್ಯದ ಕಾರಣಕ್ಕೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಳು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಮೃತ ದಿವ್ಯಾಳ ಮೈ ತುಂಬ ಗಾಯದ ಗುರುತುಗಳಿವೆ. ಈ ಹಿನ್ನೆಲೆಯಲ್ಲಿ ದಿವ್ಯಾಳ ಹೆತ್ತವರು ಮಂಜುನಾಥ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ ಮಂಜುನಾಥ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಜುನಾಥನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದಿವ್ಯಾ ಸಾವಿನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿದ್ದಾರೆ.

ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Related Articles

Back to top button