Kannada NewsKarnataka NewsLatest
ಬಿಡಿಸಿಸಿ ಬ್ಯಾಂಕ್ ನಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ.

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೊರೋನಾ ಮಹಾಮಾರಿ ವಿರುದ್ದ ಹೋರಾಟಕ್ಕೆ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ವತಿಯಿಂದ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.
ಶನಿವಾರ ಬೆಂಗಳೂರಿನ ಸಿಎಂ ಬಿ ಎಸ್ ಯಡಿಯೂಪ್ಪನವರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಬಿಜೆಪಿ ಕಾರ್ಯಕಾರಣಿ ಸದಸ್ಯ ಹನುಮಂತ ಕೊಟಬಾಗಿ ಹಾಗೂ ರಾಜೇಂದ್ರ ದೇಸಾಯಿ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಚೇಕ್ ಹಸ್ತಾಂತರಿಸಲಾಯಿತು.




