ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಫೇಸ್ ಬುಕ್ ನಲ್ಲಿ ಪರಿಚಿತನಾದ ವೈದ್ಯನೊಬ್ಬ ವೈದ್ಯೆಗೆ ಕಿರುಕುಳ ನೀಡಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಫೇಸ್ ಬುಕ್ ನಲ್ಲಿ ಎರಡು ವರ್ಷಗಳ ಹಿಂದೆ ಪರಿಚಿತನಾದ ವೈದ್ಯ ತನ್ನನ್ನು ವಿವಾಹವಾಗುವಂತೆ ಬಲವಂತ ಮಾಡುತ್ತಿದ್ದಾನೆ. ಹಾಸ್ಟೇಲ್ ಬಳಿ ಬಂದು ಗಲಾಟೆ ಮಾಡುತ್ತಿದ್ದಾನೆ. ಅಲ್ಲದೇ ತನಗೆ ಬರುವ ಮದುವೆ ಪ್ರಸ್ತಾಪಗಳಿಗೆ ಅಡ್ಡಿಪಡಿಸುತ್ತಿದ್ದಾನೆ ಎಂದು ವೈದ್ಯೆ ನಿಮ್ಸ್ ಸಿಬ್ಬಂದಿ ಹೈದರಾಬಾದ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿ ವೈದ್ಯ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ