CrimeKannada NewsKarnataka NewsPolitics

*ಮದ್ಯ ಸೇವನೆ ಮಾಡಿಸಿ ನಾಲ್ವರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ನಾಲ್ವರು ದುಷ್ಕರ್ಮಿಗಳು ಮಹಿಳೆಗೆ ಮದ್ಯ ಸೇವನೆ ಮಾಡಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

39 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರಿನಲ್ಲಿ ಕೇಳಿ ಬಂದಿದೆ. ಹೊಸಪೇಟೆ ಮೂಲದ ಮಹಿಳೆ ಪರಿಚಯಸ್ಥರಿಂದ ಹಣ ಪಡೆಯಲು ಕುಷ್ಟಗಿ ಪಟ್ಟಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. 

ಸಂಜೆ ಬೈಕ್‌ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪವಿದೆ. ಘಟನೆಯಿಂದ ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣದ ಮಾಹಿತಿ ತಿಳಿದ ತಕ್ಷಣ ಡಿವೈಎಸ್ಪಿ ಮುತ್ತಣ್ಣ ಸವರಗೋಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Home add -Advt

Related Articles

Back to top button