
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ನಿವಾಸಿಯಾದ 27 ವರ್ಷ ವಯಸ್ಸಿನ ಶಾಂತಾ ರಾಯಪ್ಪ ಹಿರೇವೆನ್ನವರ ಎಂಬ ಮಹಿಳೆ ಕಾಣೆಯಾಗಿದ್ದಾರೆ ಎಂದು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯು ಸುಮಾರು 5. 3 ಅಡಿ ಎತ್ತರ, ಮೈಯಿಂದ ಸದೃಡ, ಗೋಧಿ ಮೈ ಬಣ್ಣ, ದುಂಡು ಮುಖ ಉದ್ದ ಮೂಗು, ಹಣೆಯ ಮೇಲೆ ಹಂಚೆ ಬೊಟ್ಟು ಹಾಗೂ ಕನ್ನಡ ಭಾಷೆ ಮಾತನಾಡುತ್ತಾಳೆ.
ಕಾಣಿಯಾದ ಮಹಿಳೆ ಕಂಡುಬಂದಲ್ಲಿ ರಾಯಬಾಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ ಅಥವಾ ರಾಯಬಾಗ ಪೊಲೀಸ ಠಾಣೆ ದೂರವಾಣಿ ಸಂಖ್ಯೆ: 08331-225333, 9480804060 ಹಾಗೂ ಜಿಲ್ಲಾ ಕಂಟ್ರೋಲ್ ರೂಮ್ : 0831-2405231 ಗೆ ಸಂಪರ್ಕಿಸಬಹುದಾಗಿದೆ ಎಂದು ರಾಯಬಾಗ ಪೋಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


