
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ತಡ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹತ್ಯೆ ಮಾಡಲಾಗಿದೆ.
ಈ ಘಟನೆಯ ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45)ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಘಟನೆ ನಡೆದ ಕೂಡಲೆ ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಸಿಬ್ಬಂದಿಗಳು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದ ದೇಹ ಬೆಳಗಾವಿ ಬೀಮ್ಸ್ ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ.
ಮಹಿಳೆ ಕೊಲೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಕಳೆದ ಆರೇಳು ತಿಂಗಳಿಂದ ಸದಾಶಿವ ನಗರದ ಬಾಡಿಗೆ ಮನೆಯಲ್ಲಿ ಮಗನೊಂದಿಗೆ ಮಹಾದೇವಿ ವಾಸವಿದ್ದರು, ಮಗ ಕಳೆದ ಎರಡು ದಿನಗಳ ಹಿಂದೆ ಊರಿಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.