CrimeKannada NewsKarnataka NewsLatest

*ಮಹಿಳೆಯ ಮೇಲೆ ಗ್ಯಾಂಗ್ ರೇಪ್: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಟ್ಟುಕೊಂಡಿದ್ದ ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ಸಂತ್ರಸ್ತ ಮಹಿಳೆ ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಇಬ್ಬರು ಕಾಮುಕರನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button