
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳು ಹಾಗೂ ಒಂದೂವರೆ ವರ್ಷದ ಮಗನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರು ಮೂಲದ ವಿಜಯಲಕ್ಷ್ಮೀ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವಳು.
ಮಹಿಳೆಯ ಸಹೋದರಿ ಮನೆಗೆ ಬಂದು ನೋಡಿದಾಗಲೇ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮೀ ಮಾಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.