CrimeKannada NewsKarnataka NewsLatest

*ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಸೊಸೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅತ್ತೆ ಕೆಲ ದಿನಗಳಿಂದ ಸೊಸೆಗೆ ವೇಶ್ಯಾವಾಟಿಕೆ ದಂಧೆ ನಡೆಸುವಂತೆ ಒತ್ತಾಯಿಸಿದ್ದು, ಇದರಿಂದ ಮನನೊಂದ ಸೊಸೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೀದರ್ ನ ಓಂ ಬಡಾವಣೆಯಲ್ಲಿ ಅತ್ತೆ ಕಿರುಕುಳಕ್ಕೆ ಬೇಸತ್ತು ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜನಾಬಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

2022ರಲ್ಲಿ ಅಂಜನಾಬಾಯಿ ಶೇಖರ್ ಎಂಬಾತನ ಜೊತೆ ವಿವಾಹವಾಗಿದ್ದರು. ಮದುವೆ ಬಳಿಕ ಪತಿ ಹಾಗೂ ಅತ್ತೆ ವರದಕ್ಷಿಣೆಗಾಗಿ ಪದೇ ಪದೇ ಪೀಡಿಸುತ್ತಿದ್ದರು. ಹಲವು ಬಾರಿ ರಾಜಿ ಪಂಚಾಯಿತಿಯೂ ಆಗಿತ್ತು. ಕೆಲ ದಿನಗಳ ಹಿಂದೆ ಅತ್ತೆ, ಸೊಸೆ ಅಂಜನಾಬಾಯಿಗೆ ೧ ಲಕ್ಷ ಹಣ ನೀಡುವಂತೆ ಕೇಳಿದ್ದಳು. ತವರಿನಿಂದ ತೆಗೆದುಕೊಂಡು ಬರುವಂತೆ ಒತ್ತಾಯಿಸಿದ್ದಳು. ಅದಕ್ಕೆ ಅಂಜನಾ ಒಪ್ಪದಿದ್ದಾಗ ವೇಶ್ಯಾವಾಟಿಕೆ ನಡೆಸುವಂತೆ ಒತ್ತಾಯಿಸಿದ್ದಾಳೆ.

ಅತ್ತೆಯ ಹಣದಾಹಕ್ಕೆ ಬೇಸತ್ತ ಸೊಸೆ ಅಂಜನಾ, ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬೀದರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button