
ಪ್ರಗತಿವಾಹಿನಿ ಸುದ್ದಿ: ಶೌಚಾಲಯಕ್ಕೆ ಹೋಗಿದ್ದ ಮಹಿಳಾ ಉದ್ಯೋಗಿಗಳ ದೃಶ್ಯವನ್ನು ಸಹೋದ್ಯೋಗಿಯೊಬ್ಬ ರೆಕಾರ್ಡ್ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇನ್ಫೋಸಿಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೊಬ್ಬ ಮಹಿಳಾ ಉದ್ಯೋಗಿಗಳು ಶೌಚಾಲಯಕ್ಕೆ ಹೋಗಿದ್ದಾಗ ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ. ಮಹಿಳಾ ಉದ್ಯೋಗಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದಾಗ ಮೊಬೈಲ್ ರಿಫ್ಲೆಕ್ಟ್ ಕಂಡು ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿ ಕಿರುಚಿಕೊಂಡಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಹೆಚ್ ಆರ್ ಸಿಬ್ಬಂದಿ ಮೊಬೈಲ್ ಪರಿಶೀಲಿಸಿದಾಗ 30ಕ್ಕೂ ಹೆಚ್ಚು ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್ ಆಗಿರುವುದು ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ವಪ್ನಿಲ್ ಬಂಧಿತ ಆರೋಪಿ. ಆಂಧ್ರಪ್ರದೇಶ ಮೂಲದ ಸ್ವಪ್ನಿಲ್, ಇನ್ಫೋಸಿಸ್ ನ ಅದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.