ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ತಮ್ಮ ಮನೆಯ ಬೆಡ್ ರೂಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿ ನಡೆದಿದೆ.
32 ವರ್ಷದ ಸವಿತಾ ಜೋಗಾಣಿ ಮೃತ ಮಹಿಳೆ. ಸಾಂಬ್ರಾದ ಮನೆಯ ಎರಡನೆ ಮಹಡಿಯಲ್ಲಿನ ಬೆಡ್ ರೂಂ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ. ತಕ್ಷಣ ಮನೆಯವರು ಸವಿತಾಳನ್ನು ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅಷ್ಟರಲ್ಲಾಗಲೇ ಸವಿತಾ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನ ಬಗ್ಗೆ ಸವಿತಾ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ