CrimeLatestNational

*BREAKING: ಮೂರನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರು ಮನೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಹರಿಯಾಣದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ದೀಪಾ ಮೃತ ಮಹಿಳೆ. ಸೋಹ್ನಾದ ಎಂವಿಎನ್ ಸೊಸೈಟಿ ಟವರ್ ನಲ್ಲಿ ಈ ಘಟನೆ ವರದಿಯಾಗಿದೆ. ಮೂರನೇ ಮಹಡಿಯಿಂದ ಏಕಾಏಕಿ ಜಿಗಿದ ಮಹಿಳೆ ಸಾವಿಗೆ ಶರಣಾಗಿದ್ದಾರೆ.

ಪತಿಯ ವಿರುದ್ಧ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ನೀಡಿತ್ತಿದ್ದ ಆರೋಪ ಕೇಳಿಬಂದಿದೆ. ಪತಿ ಜಿತಿನ್ ಪ್ರತಿದಿನ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದನಂತೆ. ಇದೇ ಕಾರಣಕ್ಕೆ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪತಿ ವಿರುದ್ಧ ದೀಪಾ ತಂದೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೀಪಾ ಆತ್ಮಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button