Kannada NewsLatestNational
*ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಎಸೆದು ಹೋದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ; ಜೈಪುರ: ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು ಆಕೆಯನ್ನು ರಸ್ತೆಯಲ್ಲಿಯೇ ಎಸೆದು ಹೋಗಿರುವ ಘೋರ ಘಟನೆ ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿದೆ.
ಮಹಿಳೆಯ ದೇಹದ ಮೇಲೆ ಗಾಯಗಳಾಗಿದ್ದು, ಬಟ್ಟೆ ಕೂಡ ಇರಲಿಲ್ಲ. ಸಹಾಯಕ್ಕಾಗಿ ಮಹಿಳೆ ಅಂಗಲಾಚುತ್ತಿದ್ದರೂ ಯಾರೂ ಸಹಾಯಕ್ಕೆ ಬಂದಿಲ್ಲ. ಯಾರೋ ಒಬ್ಬರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಲೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೊಪಿಗಳನ್ನು ಬಂಧಿಸಲಾಗಿದೆ. ಶನಿವಾರ ರಾತ್ರಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರವೆಸಗಿ, ವಿವಸ್ತ್ರಗೊಳಿಸಿ, ರಸ್ತೆಯಲ್ಲಿ ಮಹಿಳೆಯನ್ನು ಎಸೆದು ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ