Latest

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ.

ಹೆದ್ದಾರಿಯಲ್ಲಿ ಕಾರು ತಡೆದು ನಿಲ್ಲಿಸಿದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಹತ್ಯೆಯಾದ ಮಹಿಳೆ. ನವೀನ್ ಹಾಗೂ ಸಂತೋಷ್ ಎಂಬುವವರು ಅರ್ಚನಾಳನ್ನು ಹತ್ಯೆಗೈದಿದ್ದಾರೆ ಎನ್ನಲಾಗಿದೆ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button