Latest

ಬಟ್ಟೆ ತೊಳೆಯುತ್ತಿದ್ದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು ; ಮನೆ ಮುಂದೆಯೇ ಭೀಕರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಹಾಸನ: ಮನೆಯ ಮುಂದೆಯೇ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ದೊಡ್ಡಪುರ ಗ್ರಾಮದಲ್ಲಿ ನಡೆದಿದೆ.

ರೇವತಿ (35) ಕೊಲೆಯಾದ ಮಹಿಳೆ. ಮನೆಯ ಹೊರಗಡೆ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ತಪ್ಪಿಸಿಕೊಂಡು ಓಡಿದ್ದಾಳೆ. ಮನೆಯ ಎದುರೇ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.

Home add -Advt

ಮನೆಯಲ್ಲಿ ಪತಿ ಹಾಗೂ ಮಕ್ಕಳು ಇಲ್ಲದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಎಸ್​ಪಿ ಡಾ.ನಂದಿನಿ ಹಾಗೂ ಇತರ ಅಧಿಕರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯಾದ್ಯಂತ ಜೇಮ್ಸ್ ಜಾತ್ರೆ; ಟಿಕೆಟ್ ಸಿಗದೆ ಅಭಿಮಾನಿಗಳ ಆಕ್ರೋಶ; ಲಾಠಿ ಚಾರ್ಜ್

Related Articles

Back to top button