CrimeKarnataka NewsLatest

*ಕುಡಿದ ಮತ್ತಿನಲ್ಲಿ ಪ್ರಿಯಕರನ ಕತ್ತು ಹಿಸುಕಿ ಕೊಲೆ: ಮಹಿಳೆ ಬಂಧನ*

ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬಳು ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಮಂಜಪ್ಪ (40) ಕೊಲೆಯಾದ ವ್ಯಕ್ತಿಯಾಗಿದ್ದು, ಶಬೀನಾ (38) ಬಂಧಿತ ಮಹಿಳೆ.

ಮಂಜಪ್ಪ ಪತ್ನಿ ಹಾಗೂ ಮಕ್ಕಳಿಂದ ದೂರವಾಗಿದ್ದು, ಕಳೆದ ಆರು ವರ್ಷಗಳಿಂದ ವಿಚ್ಛೇದಿತ ಮಹಿಳೆ ಶಬೀನಾ ಜೊತೆ ವಾಸವಾಗಿದ್ದ. ಇಬ್ಬರೂ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ಎಂದಿನಂತೆ ಮದ್ಯ ಸೇವಿಸಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಬೀನಾ ಸೀರೆಯಿಂದ ಮಂಜಪ್ಪನ ಕತ್ತು ಬಿಗಿದು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.
.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಶಬೀನಾಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹದಡಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button