*ಬುದ್ಧಿಮಾಂದ್ಯ ಮಹಿಳೆ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ*

ಕಾಮುಕ ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ಬುದ್ಧಿಮಾಂದ್ಯ ಮಹಿಳೆ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಈ ವೇಳೆ ಪೋಷಕರು ಸಂತ್ರಸ್ತೆಯನ್ನು ವಿಚಾರಿಸಿದಾಗ ಸಂಬಂಧಿಕನೇ ಅತ್ಯಾಚಾರವೆಸಗಿರುವುದು ತಿಳಿದುಬಂದಿದೆ. ಪ್ರಕರಣ ಸಂಬಂಧ ಮಾನ್ವಿ ಪೊಲೀಸರು ಆರೋಪಿ ತಿಮ್ಮನಗೌಡ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. *ಮನೆಗೆ ನುಗ್ಗಿ ಉದ್ಯಮಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು*