Kannada NewsKarnataka NewsLatest

*ಮಹಿಳೆಯ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ, ಕೊಲೆ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋ, ಕ್ಯಾಬ್ ಗಳಲ್ಲಿ ಮಹಿಳೆಯರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ. ಆಟೋಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಆಟೋ ಚಾಲಕ ಆಕೆಯ ಮೇಲೆ ಅತ್ಯಾಚಾರವೆಸಗಿ ಕಟ್ಟಡದಿಂದ ತಳ್ಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಫೆ.20ರಂದು ಶಾಂತಿನಗರದ ಜನತಾ ಕೋ ಆಪರೇಟಿವ್ ಕಟ್ಟಡದ ಕೆಳಗೆ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಮೃತ ಮಹಿಳೆಯ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ, ಕೊಲೆ ರಹಸ್ಯ ಬಯಲಾಗಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ಆಟೋ ಚಾಲಕ ಮುಬಾರಕ್ (28) ನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ.

ಫೆ.20ರಂದು ಮುಂಜಾನೆ ಮಾರ್ಕೆಟ್ ಬಳಿ ಮಹಿಳೆಯೊಬ್ಬಳು ಸಂಪಂಗಿರಾಮನಗರಕ್ಕೆ ಹೋಗಲೆಂದು ಆಟೋಗಾಗಿ ಕಾಯುತ್ತಿದ್ದರು. ಈ ವೇಳೆ ಆಟೋ ಚಾಲಕನೊಬ್ಬ ಸಂಪಂಗಿರಾಮನಗರಕ್ಕೆ ಹೋಗುವುದಾಗಿ ಹೇಳಿದ್ದಾನೆ. ಆಟೋ ಹತ್ತಿದ್ದ ಮಹಿಳೆಯನ್ನು ಶಾಂತಿನಗರದ ಜನತಾ ಕೋ ಆಪರೇಟಿವ್ ಕಟ್ಟಡಕ್ಕೆ ಕರೆತಂದು ಅತ್ಯಾಚಾರವೆಸಗಿದ್ದಾನೆ. ಕೃತ್ಯದ ಬಳಿಕ ಮಹಿಳೆಯನ್ನು ಕಟ್ಟಡದಿಂದ ತಳ್ಳಿ ಹತ್ಯೆ ಮಾಡಿದ್ದಾನೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸಂಪಂಗಿರಾಮನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button