Latest

*ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಮಾರಾಟ; ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕೆಲಸ ಕೊಡಿಸುವುದಾಗಿ ಹೇಳಿ ಕರೆದೊಯ್ದು ಮಹಿಳೆಯೊಬ್ಬರನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆಯ ಹೊನಾಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಮೇರೆಗೆ 3 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಹೊನ್ನಾಳಿ ಮೂಲದ 30 ವರ್ಷದ ಮಹಿಳೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ 1 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿದೆ. ಮಹಿಳೆ ಬೇರೆಯವರ ಮೊಬೈಲ್ ನಿಂದ ತನ್ನ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ.

Home add -Advt

ಮಹಿಳೆ ಐದು ವರ್ಷದ ಹಿಂದೆ ವಿವಾಹವಾಗಿತ್ತು. ಓರ್ವ ಮಗ ಕೂಡ ಇದ್ದಾನೆ. ಆದರೆ ಮಹಿಳೆಯ ಪತಿ ಸಾವನ್ನಪ್ಪಿದ್ದರು. ಇದರಿಂದ ಜೀವನ ನಡೆಸಲು ಕಲ್ಯಾಣ ಮಂಟಪಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮೇ 12ರಂದು ಶಿವಮೊಗ್ಗಕ್ಕೆ ಹೋಗುತ್ತೇನೆ ಎಂದು ಹೋಗಿದ್ದ ಮಹಿಳೆ ವಾಪಾಸ್ ಆಗಿರಲಿಲ್ಲ. ಇದರಿಂದ ಸಹೋದರ ತೀವ್ರ ಚಿಂತೆಗೀಡಾಗಿದ್ದ. ಅಷ್ಟರಲ್ಲಿ ಮಹಿಳೆ ಬೇರೊಬ್ಬರ ಫೋನ್ ನಿಂದ ಸಹೋದರನಿಗೆ ಕರೆ ಮಾಡಿ ತನ್ನನು 1 ಲಕ್ಷ ರೂಪಾಯಿಗೆ ಸೊಲ್ಲಾಪುರದ ವ್ಯಕ್ತಿಯೊಬ್ಬರಿಗೆ ಮಾರಿದ್ದಾರೆ ಎಂದು ಅಳಲುತೋಡಿಕೊಂಡಿದ್ದರು.

ತಕ್ಷಣ ಮಹಿಳೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ಸಹೋದರಿ ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಭದ್ರಾವತಿ ಮೂಲದ ರೋಜಿ ಲೀನಾ (43), ಮಲ್ಲಿಕಾರ್ಜುನ (47) ಹಾಗೂ ಲೋಕೇಶ್ (35) ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Related Articles

Back to top button