
ಪ್ರಗತಿವಾಹಿನಿ ಸುದ್ದಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಮನನೊಂದು ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ನಡೆದಿದೆ.
ಅಂದ್ರಹಳ್ಳಿಅ ನಿವಾಸಿ ಮಾನಸ (25) ನೇಣಿಗೆ ಶರಣಾದ ಮಹಿಳೆ. 6 ವರ್ಷಗಳ ಹಿಂದೆ ಮಾನಸ, ದಿಲೀಪ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಹೆಣ್ಣು ಮಗುವಿದೆ. ಆದರೆ ಪತಿ ದಿಲೀಪ್ ಬೇರೊಬ್ಬಳ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಇದನ್ನು ಪತ್ನಿ ಮಾನಸ ಪ್ರಶ್ನಿಸಿದ್ದಳು.
ಇದೇ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಎಷ್ಟೇ ಬುದ್ಧಿವಾದ ಹೇಳಿದರೂ ಪತಿ ಕೇಳುತ್ತಿರಲಿಲ್ಲ ಎನ್ನಲಾಗಿದೆ. ತೀವ್ರವಾಗಿ ಮನನೊಂದ ಮಾನಸ ಇಂದು ಲೈವ್ ವಿಡಿಯೋ ಮಾಡುತ್ತ ನೇಣಿಗೆ ಕೊರಳೊಡ್ಡಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ