
36 ಲಕ್ಷಕ್ಕೂ ಅಧಿಕ ಮಹಿಳೆಯರಲ್ಲಿ ಕ್ಯಾನ್ಸರ್ ತಪಾಸಣೆ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ 2023 ಮಹಿಳೆಯಲ್ಲಿ ಕ್ಯಾನ್ಸರ್ ಲಕ್ಷಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಆಘಾತಾಕಾರಿ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ 36 ಲಕ್ಷಕ್ಕೂ ಅಧಿಕ ಮಹಿಳೆಯರಲ್ಲಿ ಕ್ಯಾನ್ಸರ್ ತಪಾಸಣೆ ನಡೆಸಲಾಗಿದ್ದು, ಅವರಲ್ಲಿ 2023 ಮಹಿಳೆಯಲ್ಲಿ ಕ್ಯಾನ್ಸರ್ ನ ಆರಂಭಿಕ ಲಕ್ಷಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕ್ಯಾನ್ಸರ್ ನಿಯಂತ್ರಿಸಲು ಹಾಗೂ ನಿಗಾವಹಿಸಲು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಲಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕ್ಯಾನ್ಸರ್ ಕೇರ್ ಟಾಸ್ಕ್ ಪೋರ್ಸ್ ರಚಿಸಿ ತಪಾಸಣೆಗೆ ವೇಗ ನೀಡಲಾಗಿದೆ.
ಹೆಚ್ಚಾಗಿ ಗರ್ಭಕಂಠ ಹಾಗೂ ಸ್ತನ ಕ್ಯಾನ್ಸರ್ ಪತ್ತೆಯಾಗಿದ್ದು, ತಪಾಸಣೆ ವೇಳೆ ಕ್ಯಾನ್ಸರ್ ದೃಢಪಟ್ಟವರಲ್ಲಿ 532 ಮಹಿಳೆಯರು ಸರ್ಕಾರದ ನೆರವಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಸ್ತನ ಕ್ಯಾನ್ಸರ್ ಗೆ ಸಂಬಂಧಿಸಿದಂತೆ 19.34 ಲಕ್ಷ ಮಹಿಳೆಯರಿಗೆ ತಪಾಸಣೆ ನಡೆಸಲಾಗಿದ್ದು, ಅವರಲ್ಲಿ 890 ಮಂದಿಯಲ್ಲಿ ಆರಂಭಿಕ ಲಕ್ಷಣಗಳು ದೃಢಪಟ್ಟಿವೆ. ಗರ್ಭಕಂಠ ಕ್ಯಾನ್ಸರ್ ತಪಾಸಣೆಗೆ ಒಳಗಾದ 16.84 ಲಕ್ಷ ಮಹಿಳೆಯರಲ್ಲಿ 1,133 ಮಂದಿಯಲ್ಲಿ ಕಾಯಿಲೆ ಖಚಿತಪಟ್ಟಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ