
ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು – ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹೆಚ್ ರವರು ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಂದು ಪೋಲಿಸರು ಎಫ್ ಐ ಆರ್ ಹಾಕಿರುವುದನ್ನು ಖಂಡಿಸಿ ರಾಜರಾಜೇಶ್ವರಿ ನಗರ ಠಾಣೆಯ ಎದುರು ಕರ್ನಾಟಕ ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.

ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ, ಸೌಮ್ಯ ರೆಡ್ಡಿ, ಉಮಾಶ್ರೀ, ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ