ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸ್ಥಗಿತಕ್ಕೆ ಆದೇಶ ನೀಡಲಾಗಿದೆ.
2021ರಿಂದ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಆರಂಭವಾಗಿತ್ತು. ಸೇಫ್ ಸಿಟಿ ಯೋಜನೆಯಡಿ ಪ್ರತ್ಯೇಕವಾಗಿ ಮಹಿಲಾ ಹೆಲ್ಪ್ ಡೆಸ್ಕ್ ತೆರೆಯಲಾಗಿತ್ತು. ಠಾಣೆಗೆ ಇಬ್ಬರು ಮಹಿಳಾ ಸಿಬ್ಬಂದಿಗಳಮ್ತೆ ಬೆಂಗಳೂರಿನಲ್ಲಿ 250 ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದರು. ಆದರೆ ಇದೀಗ ಈ ಯೋಜನೆಗೆ ಅಂತ್ಯವಾಗುತ್ತಿದೆ.
ಮಹಿಳಾ ಹೆಲ್ಪ್ ಡೆಸ್ಕ್ ಯೋಜನೆಗೆ 3 ವರ್ಷಕ್ಕೆ ಮಾತ್ರ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಯೋಜನೆ ಕೈಬಿಡುವಂತೆ ಬೆಂಗಳೂರು ನಗರ ಆಡಳಿತ ಡಿಸಿಪಿ ಆದೇಶ ನೀಡಿದ್ದಾರೆ. ಹಾಗಾಗಿ ಡಿಸೆಂಬರ್ 31ರಿಂದ ಪೊಲಿಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸೇವೆ ಸ್ಥಗಿತಗೊಳ್ಳುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ