
ಪ್ರಗತಿವಾಹಿನಿ ಸುದ್ದಿ; ಮುಂಬೈ: ಯೋಗ ಗುರು ಬಾಬಾ ರಾಮ್ ದೇವ್ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇದೀಗ ಬಾಬಾ ರಾಮ್ ದೇವ್ ಅವರು ನೀಡಿರುವ ಇನ್ನೊಂದು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ನನ್ನ ದೃಷ್ಟಿಯಲ್ಲಿ ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. ಮಹಾರಾಷ್ಟ್ರದ ಥಾಣೆಯಲ್ಲಿ ಯೋಗ ವಿಜ್ಞಾನ ಶಿಬಿರ ಹಾಗೂ ಮಹಿಳೆಯರಿಗಾಗಿ ಯೋಗ ತರಬೇತಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅವರ ಸಮ್ಮುಖದಲ್ಲಿಯೇ ಮಹಿಳೆಯರ ಬಟ್ಟೆಯ ಬಗ್ಗೆ ಬಾಬಾ ರಾಮ್ ದೇವ್ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ಯೋಗ ತರಬೇತಿಯಲ್ಲಿ ಭಾಗವಹಿಸಿದ್ದ ಮಹಿಳೆಯರು ಸಮಾವೇಶಕ್ಕಾಗಿ ಸೀರೆಯನ್ನೂ ತಂದಿದ್ದರು. ಆದರೆ ಯೋಗ ತರಬೇತಿ ಮುಗಿಯುತ್ತಿದ್ದಂತೆಯೇ ಸಮಾವೇಶ ಆರಂಭವಾಗಿದ್ದರಿಂದ ಮಹಿಳೆಯರಿಗೆ ಸೀರೆ ಉಟ್ಟುಕೊಳ್ಳಲು ಸಮಯಾವಕಾಶವಿರಲಿಲ್ಲ ಎನ್ನಲಾಗಿದೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್, ಮಹಿಳೆಯರು ಸೀರೆಯಲ್ಲಿಯೂ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್ ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ ದೃಷ್ಟಿಯಲ್ಲಿ ಅವರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಹೇಳಿದ್ದಾರೆ.
ಬೆಳಗಾವಿ ಗಡಿ ವಿವಾದ; ಬಿಜೆಪಿಯ ಮ್ಯಾಚ್ ಫಿಕ್ಸಿಂಗ್
https://pragati.taskdun.com/karnataka-maharashtra-border-issued-k-shivakumarranadeep-surjewala/