
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೇಟಗೇರಿ ನಿವಾಸಿಯಾದ ಶ್ವೇತಾ ಹನುಮಂತ ಗೋಪಾಳಿ ಅವರು ಫೆ.೪ ರಂದು ಮುಂಜಾನೆ ೧೦ ಗಂಟೆಯಿಂದ ೧೧ ಗಂಟೆಯ ನಡುವಿನ ಅವಧಿಯಲ್ಲಿ ತನ್ನ ಮನೆಯಿಂದ ಯಾರಿಗೂ ಹೇಳದೆ ಕೇಳದೇ ಕಾಣೆಯಾಗಿದ್ದಾರೆ ಎಂದು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ವೇತಾ ಹನುಮಂತ ಗೋಪಾಳಿ (೧೯ ವರ್ಷ) ೪.೮ ಫೂಟ್ ಗೋಧಿ ಮೈಬಣ್ಣ, ದುಂಡುಮುಖ, ಗುಂಡು ಮೂಗು, ಕಪ್ಪು ಕೂದಲು, ಸದೃಢ ಮೈಕಟ್ಟು ಹೊಂದಿದ್ದಾರೆ. ಹಸಿರು ಮತ್ತು ಸಾದಾ ಬಿಳಿ ಬಣ್ಣದ ಚೂಡಿದಾರ ಧರಿಸಿದ್ದಾರೆ. ಕನ್ನಡ, ಮತ್ತು ಇಂಗ್ಲೀಷ ಭಾಷೆ ಮಾತನಾಡುತ್ತಾರೆ.
ಸುಳಿವು ಸಿಕ್ಕಲ್ಲಿ ಗೋಕಾಕ ತಾಲ್ಲೂಕಿನ ಕುಲಗೋಡ ಪೊಲೀಸ್ ಠಾಣೆಗೆ ದೂರವಾಣಿ ಸಂಖ್ಯೆ: ೦೮೩೩೪-೨೨೨೨೩೩ ಗೆ ಸಂಪರ್ಕಿಸಿ ಎಂದು ಕುಲಗೋಡ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ