Latest
ಆತ್ಮಹತ್ಯೆಗೆ ಶರಣಾದ ಕೃಷಿ ಅಧಿಕಾರಿ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಮಹಿಳಾ ಕೃಷಿ ಅಧಿಕಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಮೃತ ಮಹಿಳಾ ಅಧಿಕಾರಿಯನ್ನು ಅರುಣಾ ಎಂದು ಗುರುತಿಸಲಾಗಿದೆ. ಸಂಗಾರೆಡ್ಡಿ ಜಿಲ್ಲೆಯ ಮನೂರ್ ಮಂಡಲ ಬಳಿ ಮಂಜಿರಾ ನದಿ ಸೇತುವೆ ಬಳಿ ಕಾರು ನಿಲ್ಲಿಸಿ ಅರುಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಧಿಕಾರಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.




