Latest

ಶಿಕ್ಷಕರಿಗೆ ವರ್ಕ್ ಫ್ರಾಮ್ ಹೋಮ್ : ಅಂತೂ ಹೊರಬಿತ್ತು ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  – ಶಿಕ್ಷಕರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಕೊನೆಗೂ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಗುರುವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಜಂಟಿ ಕಾರ್ಯದರ್ಶಿ ಆರ್.ಸೋಮಶೇಖರ್ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಜುಲೈ 31ರ ವರೆಗೂ ಶಿಕ್ಷಕರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ತಿಳಿಸಲಾಗಿದ್ದು, ಈ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸುವಂತೆ ಸೂಚಿಸಲಾಗಿದೆ.

ಜೂನ್ 8ರಿಂದ ಶಾಲೆಗಳಲ್ಲಿ ಪೂರ್ವ ಸಿದ್ಧತೆ ಹೆಸರಿನಲ್ಲಿ ಶಿಕ್ಷಕರು ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಸೂಚಿಸಿತ್ತು. ರಾಜ್ಯದ ಎಲ್ಲ ಶಾಲೆಗಳಲ್ಲಿ ಶಿಕ್ಷಕರು ಕೊರೋನಾ ಆತಂಕದ ಮಧ್ಯೆಯೂ ಶಾಲೆಗೆ ಹಾಜರಾಗುತ್ತಿದ್ದು. ಈ ಸಂಬಂಧ ಶಿಕ್ಷಣ ಇಲಾಖೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಶಿಕ್ಷಣ ಸಚಿವರು ಸ್ಪಂದಿಸಿರಲಿಲ್ಲ. ಇದೀಗ ಕೊರೋನಾ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಎಚ್ಚೆತ್ತುಕೊಂಡಿದೆ.

Home add -Advt

ಪ್ರಗತಿವಾಹಿನಿ  ಈ ಕುರಿತು ಪ್ರಕಟಿಸಿದ್ದ ವರದಿ –

ಶಿಕ್ಷಕರಿಗೆ ಮನೆಯಿಂದಲೇ ಕೆಲಸ: ಒಂದೆರಡು ದಿನದಲ್ಲಿ ಆದೇಶ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button