Kannada NewsKarnataka NewsLatest

*ಶೆಡ್ ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಶೆಡ್ ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು  ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮುತ್ಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಲೇಬರ್ ಶೆಡ್ ನಲ್ಲಿ ಮಲಗಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಪ್ರಾಣಬಿಟ್ಟಿದ್ದಾರೆ. ಮೃತರನನ್ನು ಜಯಂತ್ ಸಿಂಧೆ (25), ನಿರೇಂದ್ರನಾಥ್ (24), ಡಾಕ್ಟರ್ ಟೈಡ್ (25), ಧನಂಜಯರ್ ಟೈಡ್ (20) ಕಾರ್ಮಿಕರು ಎಂದು ಗುರುತಿಸಲಾಗಿದೆ.

ಖಾಸಗಿ ಕಂಪನಿಯ ವೇರ್ ಹೌಸ್ ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾತ್ರಿ ಶೆಡ್ ಕಿಟಿಕಿ ಬಾಗಿಲು ಕ್ಲೋಸ್ ಮಾಡಿ ಅಡುಗೆ ಮಾಡಿದ್ದರು. ತಡರಾತ್ರಿ ಉಸಿರುಗಟ್ಟಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button