National

*ಹಿಂಸಾಚಾರಕ್ಕೆ ತಿರುಗಿದ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಹಿಂಸಾಚಾರ ಪೀಡಿತ ಸಂಸರ್‌ಗಂಜ್ ಪ್ರದೇಶದ ಜಾಫ್ರಾಬಾದ್‌ನಲ್ಲಿರುವ ತಮ್ಮ ಮನೆಯೊಳಗಿದ್ದಾಗ ತಂದೆ ಹಾಗೂ ಮಗನಿಗೆ ಅನೇಕ ಬಾರಿ ಚಾಕುವಿನಿಂದ ಇರಿದಿರುವುದು ಪತ್ತೆಯಾಗಿದೆ. ಮನೆಯೊಳಗೆ ಬಿದ್ದಿದ್ದ ಅವರಿಬ್ಬರ ಸಮೀಪದ ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ದುಷ್ಕರ್ಮಿಗಳು ತಮ್ಮ ಮನೆಯ ಲೂಟಿ ಮಾಡಿದ್ದಾರೆ. ಹೊರಡುವ ಮೊದಲು ಚಾಕುವಿನಿಂದ ಇಬ್ಬರಿಗೆ ಇರಿದಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚು ಬಿತ್ತರವಾಗಿದ್ದರಿಂದ ಹಿಂಸಾಚಾರ ಮತ್ತಷ್ಟು ಹೆಚ್ಚಳಗೊಳ್ಳಲು ಕಾರಣವಾಗಿದೆ. ಹೀಗಾಗಿ ಯಾರಾದರೂ ಸುಳ್ಳು ಸುದ್ದಿಗಳನ್ನು ಹರಡಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button