Cancer Hospital 2
Bottom Add. 3

*ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ರೋಹಿತ್ ಶರ್ಮ‌ ಸಾರಥ್ಯದ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಶುಭ ಹಾರೈಸಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಜಯಗಳಿಸಲಿ ಎಂದು ‌ಸಚಿವರು ಶುಭ ಕೋರಿದ್ದಾರೆ. ಭಾರತ ತಂಡ ಟೂರ್ನಿಯಲ್ಲಿ ಸತತ 10 ಪಂದ್ಯಗಳಲ್ಲಿ ಜಯ ದಾಖಲಿಸಿದ್ದು, ಫೈನಲ್ ಪಂದ್ಯದಲ್ಲೂ ಭಾರತ ತಂಡವೇ ಜಯಿಸಲಿ ಎಂದಿದ್ದಾರೆ.

ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಗೆಲುವಿನ ಅಭಿಯಾನ ಆರಂಭಿಸಿದ್ದ ಭಾರತ, ಇದೇ ಗೆಲುವಿನ ಲಯವನ್ನು ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲೂ ಮುಂದುವರಿಸಲಿ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭ ಕೋರಿದ್ದಾರೆ. ನಾಯಕ ರೋಹಿತ್ ಶರ್ಮ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಕನ್ನಡಿಗ ರಾಹುಲ್ ಒಳಗೊಂಡ ಭಾರತ ತಂಡದಿಂದ ಸಂಘಟಿತ ಹೋರಾಟ ಮೂಡಿ ಬರಲಿ ಎಂದು ಸಚಿವರು ಆಶಿಸಿದ್ದಾರೆ.

Bottom Add3
Bottom Ad 2

You cannot copy content of this page